Ration Card: ರೇಷನ್ ಕಾರ್ಡ್ ತಿದ್ದುಪಡಿಗೆ ರಾಜ್ಯ ಸರ್ಕಾರದಿಂದ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ! ಇವರೆಲ್ಲರೂ ಮತ್ತೆ ತಿದ್ದುಪಡಿ ಮಾಡಿಸಬಹುದು!
Ration Card: ಎಲ್ಲದಕ್ಕೂ ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಹೊಸ ಲೇಖನಕ್ಕೆ ತಮ್ಮೆಲ್ಲರಿಗೂ ಸ್ವಾಗತ, ಈ ಲೇಖನದಲ್ಲಿ ನಾವು ನಿಮಗೆ ರೇಷನ್ ಕಾರ್ಡ್ ತಿದ್ದುಪಡಿಗೆ ರಾಜ್ಯ ಸರ್ಕಾರದಿಂದ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು ಯಾರೆಲ್ಲಾ ರೇಷನ್ ಕಾರ್ಡ್ ತಿದ್ದುಪಡಿಯನ್ನು ಮಾಡಿಸಬಹುದು ಹಾಗೂ ಯಾವೆಲ್ಲ ದಾಖಲೆಗಳು ಬೇಕಾಗುತ್ತದೆ ಮತ್ತು ಏನೆಲ್ಲಾ ತಿದ್ದುಪಡಿ ಮಾಡಬಹುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಿದ್ದೇವೆ ಪೂರ್ತಿಯಾಗಿ ಓದಿರಿ.
ಸ್ನೇಹಿತರೆ ರಾಜ್ಯದಲ್ಲಿ ಸಾಕಷ್ಟು ಜನ ಫಲಾನುಭವಿಗಳು ಹೊಸ ರೇಷನ್ ಕಾರ್ಡ್ ಮಾಡಿಸಲು ಕಾಯುತ್ತಿದ್ದಾರೆ ಆದರೆ ರಾಜ್ಯ ಸರ್ಕಾರವು ಅದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಆದಕಾರಣ ಫಲಾನುಭವಿಗಳು ರೇಷನ್ ಕಾರ್ಡ್ ತಿದ್ದುಪಡಿಗಾದರೂ ಅವಕಾಶ ಮಾಡಿಕೊಡಿ ಎಂದು ತಮ್ಮ ಸಿಟ್ಟನ್ನು ಹೊರಹಾಕಿದ್ದರು ಈ ಕಾರಣದಿಂದ ರಾಜ್ಯ ಸರ್ಕಾರವು ಮತ್ತೊಮ್ಮೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಕಲ್ಪಿಸಿಕೊಟ್ಟಿದೆ.
ರಾಜ್ಯದಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ಕಾರದಿಂದ ಅಧಿಕೃತವಾಗಿ ಆದೇಶವನ್ನು ಹೊರಡಿಸಲಾಗಿದೆ ಈ ಒಂದು ತಿದ್ದುಪಡಿ ಮಾಡುವ ಪ್ರಕ್ರಿಯೆ ಸುಮಾರು 20 ರಿಂದ 30 ದಿನಗಳ ಸುದೀರ್ಘ ಕಾಲಾವಕಾಶವನ್ನು ರಾಜ್ಯ ಸರ್ಕಾರವು ಫಲಾನುಭವಿಗಳಿಗೆ ಮಾಡಿಕೊಟ್ಟಿದೆ. ಹೀಗಾಗಿ ಈ ಒಂದು ಸುವರ್ಣ ಅವಕಾಶವನ್ನು ರಾಜ್ಯದ ಎಲ್ಲಾ ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸರ್ಕಾರವು ಮನವಿ ಮಾಡಿದೆ.
ಏನೆಲ್ಲ ತಿದ್ದುಪಡಿ ಮಾಡಿಕೊಳ್ಳಬಹುದು?
ಮೃತಪಟ್ಟವರ ಹೆಸರನ್ನು ತೆಗೆಸಬಹುದು.
ಕುಟುಂಬಸ್ಥರ ಹೆಸರು ತಿದ್ದುಪಡಿ ಮಾಡಬಹುದು.
ಹೊಸದಾಗಿ ಮದುವೆಯಾದ ದಂಪತಿಗಳ ಹೆಸರು ಸೇರ್ಪಡೆ ಮಾಡಬಹುದು.
ನಿಮ್ಮ ನ್ಯಾಯಬೆಲೆ ಅಂಗಡಿಯನ್ನು ಬದಲಾವಣೆ ಮಾಡಿಸಬಹುದು.
ಹೀಗೆ ಇನ್ನು ಹಲವು ತಿದ್ದುಪಡಿಗೆ ಅವಕಾಶ ನೀಡಲಾಗಿದೆ.
ಯಾವೆಲ್ಲಾ ದಾಖಲೆಗಳು ಬೇಕಾಗುತ್ತವೆ?
ಕುಟುಂಬಸ್ಥರ ಆಧಾರ್ ಕಾರ್ಡ್
ಹಳೆಯ ರೇಷನ್ ಕಾರ್ಡ್
ಐದು ವರ್ಷದ ಒಳಗಿನ ಮಕ್ಕಳ ಮನೆಯಲ್ಲಿದ್ದರೆ ಅವರ (ಜನನ ಪ್ರಮಾಣ ಪತ್ರ)
ಮನೆಯಲ್ಲಿ ಯಾರಾದರೂ ಮೃತಪಟ್ಟಿದ್ದರೆ (ಮರಣ ಪ್ರಮಾಣ ಪತ್ರ)
ಮೊಬೈಲ್ ನಂಬರ್ (ಆಧಾರ್ ಕಾರ್ಡ್ ಗೆ ಲಿಂಕ್ ಆಗಿರಬೇಕು)
ತಿದ್ದುಪಡಿ ಎಲ್ಲಿ ಮಾಡಿಸಬೇಕು?
ನೀವು ರೇಷನ್ ಕಾರ್ಡ್ ತಿದ್ದುಪಡಿಯನ್ನು ಮಾಡಿಸಲು ಬಯಸಿದರೆ ನಿಮ್ಮ ಹತ್ತಿರದ ಯಾವುದಾದರೂ ಒಂದು ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ನಿಮ್ಮ ಸರತಿ ಬಂದಾಗ ನೀವು ರೇಷನ್ ಕಾರ್ಡ್ ತಿದ್ದುಪಡಿಯನ್ನು ಮಾಡಿಸಿಕೊಳ್ಳಬಹುದು.