ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ! ಈ ಎಲ್ಲಾ ದಾಖಲೆಗಳು ಕಡ್ಡಾಯ! ಕೂಡಲೆ ಅರ್ಜಿ ಸಲ್ಲಿಸಿ | BPL Ration Card Correction
BPL Ration Card: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಕ್ಕೆ ತಮ್ಮೆಲ್ಲರಿಗೂ ಸ್ವಾಗತ, ಈ ಲೇಖನದಲ್ಲಿ ನಿಮ್ಮೆಲ್ಲರಿಗೂ ಒಂದು ಪ್ರಮುಖ ಮಾಹಿತಿಯನ್ನು ನೀಡಲು ಹೊರಟಿದ್ದೇವೆ. ನಮ್ಮ ರಾಜ್ಯದಲ್ಲಿ ಯಾರೆಲ್ಲ ರೇಷನ್ ಕಾರ್ಡ್ ಹೊಂದಿದ್ದಾರೋ ಅವರೆಲ್ಲರಿಗೂ ಸಹ ಒಂದು ಪ್ರಮುಖ ಮಾಹಿತಿ ಇಲ್ಲಿದೆ. ರಾಜ್ಯ ಸರ್ಕಾರದಿಂದ ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾರಿಲ್ಲ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬೇಕು ಅಂದುಕೊಂಡಿದ್ದೀರಾ ಅವರೆಲ್ಲರೂ ಸಹ ಕೂಡಲೇ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಈ ಲೇಖನದಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲೆಗಳು ಬೇಕು? ಹಾಗೂ ಹೇಗೆ ಅರ್ಜಿ ಸಲ್ಲಿಸುವುದು? ಮತ್ತು ರೇಷನ್ ಕಾರ್ಡ್ ನಲ್ಲಿ ಏನೆಲ್ಲಾ ಹೇಳು ತಿದ್ದುಪಡಿ ಮಾಡಿಸಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಲೇಖನವನ್ನು ಪೂರ್ತಿಯಾಗಿ ಓದಿರಿ ಹಾಗೂ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ.
BPL Ration Card Correction
ಹೌದು ಸ್ನೇಹಿತರೆ, ಕಳೆದ ಡಿಸೆಂಬರ್ ತಿಂಗಳಿಂದಲೂ ಸಹ ರೇಷನ್ ಕಾರ್ಡ್ ತಿದ್ದುಪಡಿಗೆ ರಾಜ್ಯ ಸರ್ಕಾರವು ಅರ್ಜಿಯನ್ನು ಆಹ್ವಾನಿಸಿದೆ. ಡಿಸೆಂಬರ್ ತಿಂಗಳ 30ನೇ ತಾರೀಕಿನಂದು ರೇಷನ್ ಕಾರ್ಡ್ ತಿದ್ದುಪಡಿಗೆ ಕೊನೆ ದಿನಾಂಕ ಮುಗಿದಿತ್ತು. ಆದ್ದರಿಂದ ರಾಜ್ಯ ಸರ್ಕಾರವು ತಿದ್ದುಪಡಿಗೆ ನೀಡಲಾಗಿದ್ದ ಕೊನೆ ದಿನಾಂಕವನ್ನು ವಿಸ್ತರಣೆ ಮಾಡಿ ಜನವರಿ 30ನೇ ತಾರೀಕಿನ ತನಕ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು. ಹೀಗಾಗಿ ಯಾರೆಲ್ಲಾ ಆಸಕ್ತರು ತಮ್ಮ ರೇಷನ್ ಕಾರ್ಡನ್ನು ತಿದ್ದುಪಡಿ ಮಾಡಲು ಬಯಸುತ್ತಾರೋ ಅವರೆಲ್ಲರೂ ಸಹ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ರೇಷನ್ ಕಾರ್ಡ್ ನಲ್ಲಿ ಏನೆಲ್ಲಾ ತಿದ್ದುಪಡಿ ಮಾಡಿಸಬಹುದು?
- ಹೊಸ ಸದಸ್ಯರ ಸೇರ್ಪಡೆ ಮಾಡಿಸಿಕೊಳ್ಳಬಹುದು.
- ರೇಷನ್ ಕಾರ್ಡ್ ನಿಂದ ಸದಸ್ಯರ ಹೆಸರನ್ನು ತೆಗೆಸಿ ಕೊಳ್ಳಬಹುದು.
- ಹಾಗೂ ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಮಾಡಿಸಿಕೊಳ್ಳಬಹುದು.
- ಕುಟುಂಬದ ಮುಖ್ಯಸ್ಥರನ್ನು ಬದಲಾವಣೆ ಮಾಡಿಕೊಳ್ಳಬಹುದು.
- ನ್ಯಾಯ ಬೆಲೆ ಅಂಗಡಿ ಬದಲಾವಣೆ ಮಾಡಿಕೊಳ್ಳಬಹುದು.
- ವಿಳಾಸವನ್ನು ಸಹ ಬದಲಾವಣೆ ಮಾಡಿಕೊಳ್ಳಬಹುದು.
- ಹೀಗೆ ಹಲವಾರು ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬಹುದು.
ತಿದ್ದುಪಡಿ ಮಾಡಿಸಲು ಬೇಕಾಗುವ ದಾಖಲೆಗಳು!
- ಕುಟುಂಬದ ಹಳೆಯ ರೇಷನ್ ಕಾರ್ಡ್
- ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ (6 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ)
- ಮೊಬೈಲ್ ನಂಬರ್
- ಇನ್ನಿತರ ದಾಖಲೆಗಳು
ತಿದ್ದುಪಡಿ ಮಾಡಿಸುವುದು ಹೇಗೆ?
ತಿದ್ದುಪಡಿ ಮಾಡಿಸಲು ಬಯಸುವ ಫಲಾನುಭವಿಗಳು ನಾವು ಮೇಲೆ ನೀಡಿರುವ ಎಲ್ಲಾ ದಾಖಲೆಗಳ ಜೊತೆಗೆ ತಮ್ಮ ಹತ್ತಿರದ ಯಾವುದಾದರೂ ಒಂದು ಸಹಾಯ ಕೇಂದ್ರಕ್ಕೆ ಅಂದರೆ (ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್) ಈ ಕೇಂದ್ರಗಳಲ್ಲಿ ಯಾವುದಾದರೂ ಒಂದು ಕೇಂದ್ರಕ್ಕೆ ತೆರಳಿ ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿಯನ್ನು ಸಲ್ಲಿಸಬಹುದು.
ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರವು ಜನವರಿ 30ನೇ ತಾರೀಖಿನ ತನಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿಪಡಿಸಿದ್ದಾರೆ. ಅರ್ಜಿ ಸಲ್ಲಿಸಲು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5:00 ತನಕ ಕಾಲಾವಕಾಶವನ್ನು ನೀಡಲಾಗಿದೆ. ಈ ಸಮಯದೊಳಗೆ ತಮ್ಮ ಅಜ್ಜಿಯನ್ನು ಫಲಾನುಭವಿಗಳು ಸಲ್ಲಿಸಿಕೊಳ್ಳಬಹುದು.