Labour Card Scholarship 2025: ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ! ಕೊನೆ ದಿನಾಂಕದೊಳಗೆ ಅರ್ಜಿ ಸಲ್ಲಿಸಿ!
ಸ್ನೇಹಿತರೆ ಎಲ್ಲರಿಗೂ ನಮಸ್ಕಾರ ಈ ಲೇಖನದ ಮೂಲಕ ನಿಮಗೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಸರ್ಕಾರವು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ. ಹಾಗೆಯೇ ಕೊನೆಯ ದಿನಗಳನ್ನು ಸಹ ಸರ್ಕಾರ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸುವ ಶಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬಹುದು ಮತ್ತು ಯಾವೆಲ್ಲ ದಾಗಲು ಬೇಕಾಗುತ್ತವೆ ಹಾಗೆಯೇ ಇನ್ನಿತರ ಎಲ್ಲ ಮಾಹಿತಿಗಳನ್ನು ನಿಮಗೆ ಈ ಲೇಖನದಲ್ಲಿ ನೀಡಲು ಹೊರಟಿದ್ದೇವೆ ಪೂರ್ತಿಯಾಗಿ ಓದಿ.
Labour Card Scholarship 2025
ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅನ್ನು ಸರ್ಕಾರವು ನಮ್ಮ ರಾಜ್ಯದಲ್ಲಿ ಇರುವಂತಹ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮತ್ತು ಕೂಲಿ ಕಾರ್ಮಿಕರ ಮಕ್ಕಳಿಗೆ ಹಾಗೆಯೇ ಬಡವರ್ಗದ ಮಕ್ಕಳಿಗೆ ಪ್ರೋತ್ಸಾಹ ಧನ ನೀಡುವ ಮತ್ತು ಅವರ ಶಿಕ್ಷಣಕ್ಕೆ ಸಹಾಯವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಪ್ರಾರಂಭಿಸಿರುವಂತಹ ವಿದ್ಯಾರ್ಥಿ ವೇತನ ಯೋಜನೆ ಇದು. ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಸರ್ಕಾರದ ಕಡೆಯಿಂದ ಸುಮಾರು ₹11,000 ಸಾವಿರ ರೂಪಾಯಿಗಳನ್ನು ಸ್ಕಾಲರ್ಶಿಪ್ ಆಗಿ ನೀಡಲಾಗುವುದು. ಹೀಗಾಗಿ ಅರ್ಹ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಲಾಭವನ್ನು ಪಡೆದುಕೊಳ್ಳಿ.
ಇದನ್ನೂ ಓದಿ: Free Sewing Machine: ಕೇಂದ್ರದಿಂದ ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ! ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ!
ಯಾರೆಲ್ಲ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು?
ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ಅಂದರೆ 10ನೇ ತರಗತಿ ಮುಗಿದ ಮೇಲೆ ಕಾಲೇಜುಗಳಲ್ಲಿ ವಿವಿಧ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಉದಾಹರಣೆಗೆ (ಪಿಯುಸಿ, ಡಿಪ್ಲೋಮೋ, ಐಟಿಐ, ಪದವಿ, ನರ್ಸಿಂಗ್, ಇಂಜಿನಿಯರಿಂಗ್) ಹೀಗೆ ಇನ್ನು ಮುಂತಾದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ತಮ್ಮ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವಾಗ?
ಈ ಒಂದು ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸರ್ಕಾರವು ವಿದ್ಯಾರ್ಥಿಗಳಿಗೆ ಜನವರಿ 15ನೇ (15/01/2025) ತಾರೀಕಿನ ತನಕ ಕೊನೆ ದಿನಾಂಕವೆಂದು ಘೋಷಿಸಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಈ ಕೊನೆ ದಿನಾಂಕದೊಳಗೆ ತಮ್ಮ ಅಜ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು!
- ಮೊದಲನೇದಾಗಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಪೋಷಕರ ಹೆಸರಲ್ಲಿ ಕಟ್ಟಡ ಕಾರ್ಮಿಕರ ಕಾರ್ಡನ್ನು ಹೊಂದಿರಲೇಬೇಕು.
- 10ನೇ ತರಗತಿ ಮುಗಿಸಿ ನಂತರ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ.
- ವಿದ್ಯಾರ್ಥಿಯು ಕರ್ನಾಟಕದ ನಿವಾಸಿ ಆಗಿರಬೇಕು.
- ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಕುಟುಂಬದ ಆದಾಯವು ವರ್ಷಕ್ಕೆ 2.5 ಲಕ್ಷ ರೂ. ಕ್ಕಿಂತ ಕಡಿಮೆ ಇರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು!
- ಹಿಂದಿನ ವರ್ಷದ ಅಂಕಪಟ್ಟಿ ಗಳು
- ಪೋಷಕರ ಲೇಬರ್ ಕಾರ್ಡ್
- ವಿದ್ಯಾರ್ಥಿ ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ಭಾವಚಿತ್ರ (ಫೋಟೋ)
- ಮೊಬೈಲ್ ಸಂಖ್ಯೆ
ಅರ್ಜಿ ಹೇಗೆ ಸಲ್ಲಿಸುವುದು?
ಈ ಲೇಬರ್ ಕಾಸ್ಕಾಲರ್ಷಿಪ್ ಗಾಗಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು SSP ತಂತ್ರಾಂಶದ ಮೂಲಕ ತಮ್ಮ ಅಜ್ಜಿಯನ್ನು ಜನವರಿ 15ನೇ ತಾರೀಖಿನೊಳಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಯಾವುದಾದರೂ ಒಂದು ಸೇವ ಕೇಂದ್ರಕ್ಕೆ ಹೋಗಿ ಅಂದರೆ (ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್) ಅಥವಾ ಯಾವುದಾದರೂ ಹತ್ತಿರದ ಕಂಪ್ಯೂಟರ್ ಸೆಂಟರ್ಗೆ ಹೋಗಿ ಅಲ್ಲಿ ನಿಮ್ಮ ಎಲ್ಲಾ ದಾಖಲೆಗಳ ಸಮೇತ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಲಿಂಕ್ ಕೆಳಗೆ ನೀಡಿದ್ದೇವೆ.
ಈ ಮೇಲಿನ ಲಿಂಕನ್ನು ಬಳಸಿಕೊಂಡು ನೀವು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿಯನ್ನು ಸುಲಭವಾಗಿ ಎಲ್ಲಾ ದಾಖಲೆಗಳು ಸಮೇತ ಸಲ್ಲಿಸಬಹುದು. ಹಾಗೆಯೇ ನಿಮಗೇನಾದರೂ ಅರ್ಜಿ ಸಲ್ಲಿಸುವಲ್ಲಿ ತೊಂದರೆ ಉಂಟಾದಲ್ಲಿ ನೀವು ನಿಮ್ಮ ಹತ್ತಿರದ ಸೈಬರ್ ಸೆಂಟರ್ ಗೆ ತೆರಳಿ ಅಲ್ಲಿಯೂ ಕೂಡ ನಿಮ್ಮಜ್ಜಿಯನ್ನು ಸಲ್ಲಿಸಬಹುದು.