New Ration Card Application: ಗುಡ್ ನ್ಯೂಸ್ ಹೊಸ ರೇಷನ್ ಕಾರ್ಡ್ ಹಾಗೂ ತಿದ್ದುಪಡಿ ಮಾಡಿಸಿಕೊಳ್ಳಲು ಅರ್ಜಿ ಪ್ರಾರಂಭ! ಕೂಡಲೇ ಅರ್ಜಿ ಸಲ್ಲಿಸಿ!
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ಲೇಖನಿಗೆ ತಮ್ಮೆಲ್ಲರಿಗೂ ಸ್ವಾಗತ ಈ ಲೇಖನದ ಮೂಲಕ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾದ ಬಗ್ಗೆ ಹಾಗೂ ರೇಷನ್ ಕಾರ್ಡನ್ನು ತಿದ್ದುಪಡಿ ಮಾಡಿಸಲು ಯಾರೆಲ್ಲ ಕಾಯುತ್ತಿದ್ದೀರೋ ಅಂತವರಿಗೆ ಗುಡ್ ನ್ಯೂಸ್ ನೀಡಲು ಹೊರಟಿದ್ದೇವೆ. ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾಗಿದೆ. ಈ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಹಾಗೂ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಮುಖ್ಯ ಮತ್ತು ಏನೆಲ್ಲ ತಿದ್ದುಪಡಿ ಮಾಡಿಸಿಕೊಳ್ಳಬಹುದು ಇದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಪೂರ್ತಿಯಾಗಿ ಓದಿ.
New Ration Card Application
ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಘೋಷಿಸುವ ಎಲ್ಲಾ ಗ್ಯಾರೆಂಟಿಗಳಿಗೆ ಹಾಗೂ ಯೋಜನೆಗಳಿಗೆ ರೇಷನ್ ಕಾರ್ಡ್ ಒಂದು ಪ್ರಮುಖವಾದ ದಾಖಲೆಯಾಗಿದೆ. ರೇಷನ್ ಕಾರ್ಡ್ ಇಲ್ಲದವರಿಗೆ ಯಾವುದೇ ರೀತಿಯ ಸರ್ಕಾರದ ಯೋಜನೆಗಳ ಲಾಭವನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ನಮ್ಮ ರಾಜ್ಯದಲ್ಲಿ ಬಡ ಮತ್ತು ಬಡತನ ರೇಖೆಗಿಂತ ಕೆಳಗಿರುವ ಎಲ್ಲರ ಬಳಿಯೂ ರೇಷನ್ ಕಾರ್ಡ್ ಇರುವುದು ಕಡ್ಡಾಯವಾಗಿದೆ.
ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಪ್ರಾರಂಭ
ಯಾರಿಲ್ಲ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಕಾಯುತ್ತಿದ್ದರು ಅವರಿಗೆಲ್ಲರಿಗೂ ಗುಡ್ ನ್ಯೂಸ್ ರೇಷನ್ ಕಾರ್ಡ್ ತಿದ್ದುಪಡಿಯನ್ನು ಮಾಡಿಸಿಕೊಳ್ಳಲು ರಾಜ್ಯ ಸರ್ಕಾರದಿಂದ ಅರ್ಜಿಯನ್ನು ಪ್ರಾರಂಭಿಸಲಾಗಿದೆ. ಈ ಒಂದು ತಿದ್ದುಪಡಿಗೆ ರಾಜ್ಯ ಸರ್ಕಾರವು ಕೊನೆಯ ದಿನಾಂಕವನ್ನು ಸಹ ಘೋಷಿಸಿದೆ. ಈ ಕೊನೆ ದಿನಾಂಕದೊಳಗೆ ಎಲ್ಲರೂ ಸಹ ನಾವು ತಿಳಿಸುವ ದಾಖಲೆಗಳೊಂದಿಗೆ ತಮ್ಮ ಅರ್ಜಿಯನ್ನು ಸಹಾಯ ಕೇಂದ್ರಕ್ಕೆ ತೆರಳಿ ಸಲ್ಲಿಸಬಹುದು.

ರೇಷನ್ ಕಾರ್ಡ್ ತಿದ್ದುಪಡಿಗೆ ಕೊನೆ ದಿನಾಂಕ
ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ನಮ್ಮ ರಾಜ್ಯದ ಜನರಿಗೆ ಸರ್ಕಾರವು ಇದೇ ತಿಂಗಳ ಜನವರಿ 31ನೇ ತಾರೀಖಿನವರೆಗೂ ಸಹ ಕೊನೆ ದಿನಾಂಕವನ್ನು ನಿಗದಿಪಡಿಸಿದೆ. ಈ ಕೊನೆ ದಿನಾಂಕದೊಳಗೆ ಸೂಕ್ತ ದಾಖಲೆಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ಅಜ್ಜಿಯನ್ನು ಸಲ್ಲಿಸಬಹುದಾಗಿದೆ.
ಏನೆಲ್ಲಾ ತಿದ್ದುಪಡಿ ಮಾಡಿಸಬಹುದು
- ಕುಟುಂಬಸ್ಥರ ಹೆಸರು ತಿದ್ದುಪಡಿ ಮಾಡಬಹುದು
- ಕುಟುಂಬದ ಮುಖ್ಯಸ್ಥರ ಬದಲಾಯಿಸಬಹುದು
- ಹೊಸ ಸದಸ್ಯರ ಸೇರ್ಪಡೆ ಮಾಡಬಹುದು
- ನ್ಯಾಯ ಬೆಲೆ ಅಂಗಡಿ ಬದಲಾವಣೆ ಮಾಡಬಹುದು
- ಇನ್ನು ಮುಂತಾದ ಬದಲಾವಣೆಗಳನ್ನು ಮಾಡಿಕೊಳ್ಳಬಹುದು
ತಿದ್ದುಪಡಿ ಮಾಡಿಸಲು ಬೇಕಾಗುವ ದಾಖಲೆಗಳು
- ಕುಟುಂಬಸ್ಥರ ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಮೊಬೈಲ್ ಸಂಖ್ಯೆ (ಆಧಾರ್ ಕಾರ್ಡ್ ಗೆ ಲಿಂಕ್ ಆಗಿರಬೇಕು)
- ಇತ್ತೀಚಿನ ಫೋಟೋ
- ಜನನ ಪ್ರಮಾಣ ಪತ್ರ (ಐದು ವರ್ಷ ಒಳಗಿನ ಮಕ್ಕಳಿಗೆ ಮಾತ್ರ)
- ಇತರೆ ಇಲ್ಲ ದಾಖಲೆಗಳು
ಹೊಸ ರೇಷನ್ ಕಾರ್ಡ್ ಮಾಡಿಸಲು ಅವಕಾಶ ಇದೆಯಾ?
ಹೇಗಿದೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಇದೆಯಾ ಎಂದು ಕೇಳುವ ಪ್ರಶ್ನೆಗೆ ಉತ್ತರ ಸರ್ಕಾರವು ಹೊಸ ರೇಷನ್ ಕಾರ್ಡ್ ಮಾಡಿಸಲು ಆಗಾಗ ಅವಕಾಶವನ್ನು ನೀಡುತ್ತದೆ ಈ ಹೊತ್ತಿನಲ್ಲಿ ಯಾರಿಲ್ಲ ಹೊಸ ರೇಷನ್ ಕಾರ್ಡ್ ಮಾಡಿಸಬೇಕು ಎಂದು ಅಂದುಕೊಳ್ಳುತ್ತಾರೋ ಅಂತವರು ಸೂಕ್ತ ದಾಖಲೆಗಳೊಂದಿಗೆ ತಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಅಂದರೆ ಗ್ರಾಮ ಒನ್ ಬೆಂಗಳೂರು ಒನ್ ಇಂತಹ ಸೇವಾ ಕೇಂದ್ರಕ್ಕೆ ತೆರಳಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಹೊಸ ರೇಷನ್ ಕಾರ್ಡ್ ಮಾಡಿಸಲು ಈ ಒಂದು ತಿದ್ದುಪಡಿಗೆ ನೀಡಿರುವ ಕಾಲಾವಕಾಶ ಮುಗಿದ ನಂತರ ರಾಜ್ಯದ ಎಲ್ಲಾ ಜನರಿಗೆ ಹೊಸ ರೇಷನ್ ಕಾರ್ಡ್ ಮಾಡಿಸಿಕೊಳ್ಳುವ ಅವಕಾಶವನ್ನು ನೀಡಲು ಸರ್ಕಾರವು ಮುಂದಾಗಿದೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನವಾದ ನಂತರ ನಿಮಗೆ ಲೇಖನದ ಮೂಲಕ ತಿಳಿಯುತ್ತದೆ.